Home ಟಾಪ್ ಸುದ್ದಿಗಳು ಬ್ರಹ್ಮರಕೂಟ್ಲು | ಟೋಲ್ ಸಿಬ್ಬಂದಿಯಿಂದ ಲಾರಿ ಚಾಲಕನ ಮೇಲೆ ಹಲ್ಲೆ ..!

ಬ್ರಹ್ಮರಕೂಟ್ಲು | ಟೋಲ್ ಸಿಬ್ಬಂದಿಯಿಂದ ಲಾರಿ ಚಾಲಕನ ಮೇಲೆ ಹಲ್ಲೆ ..!

►ಟೋಲ್ ಗೇಟ್ ಸಿಬ್ಬಂದಿ ರೌದ್ರಾವತಾರದ ವೀಡಿಯೋ ವೈರಲ್


ಬಂಟ್ವಾಳ: ಟೋಲ್ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿಯೊಬ್ಬ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಇದು ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿರುವ ವಿವಾದಾತ್ಮಕ ಟೋಲ್ ಗೇಟ್ ನಲ್ಲಿ ನಡೆದ ಘಟನೆಯಾಗಿದ್ದು, ಈವರೆಗೆ ಸ್ಥಳೀಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಶುಕ್ರವಾರ ಸಂಜೆ ವೇಳೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ ಬ್ರಹ್ಮರಕೂಟ್ಲುನಲ್ಲಿರುವ ಟೋಲ್ ಗೇಟ್ ನಲ್ಲಿ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಕೈಯಿಂದ ಹಲ್ಲೆ ನಡೆಸಿದ್ದಲ್ಲದೆ, ಲಾರಿ ಬಾಗಿಲು ತೆರೆದು ಆತನ ಕೈ ಹಿಡಿದು ಹೊರಗೆ ಎಳೆಯುತ್ತಿದ್ದಾನೆ. ಅಲ್ಲದೆ ಅವ್ಯಾಚ್ಚ ಶಬ್ದಗಳಿಂದ ಬೈದು ಲಾರಿಯನ್ನು ವಾಪಸ್ ಹಿಂದೆ ಕಳುಹಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

Join Whatsapp
Exit mobile version