ಬೆಂಗಳೂರು; ಕರಾವಳಿ ಭಾಗದಲ್ಲಿ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಂಶೋಧನಾ ಕೇಂದ್ರವನ್ನು ಮುಂದಿನ ದಿನಗಳಲ್ಲಿ ಕೃಷಿ ವಿಶ್ವವಿದ್ಯಾಲಯವನ್ನಾಗಿ ಮಾಡಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಇಂಧನ ಸಚಿವ ವಿ.ಸುನೀಲ್‌ಕುಮಾರ್ ಹೇಳಿದ್ದಾರೆ.
ಬ್ರಹ್ಮಾವರದಲ್ಲಿಂದು “ಕೃಷಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸುಮಾರು ೩೫೦ ಎಕರೆ ಜಾಗ ಇರುವಂತಹ ಈ ಪ್ರದೇಶದಲ್ಲಿ ಕೃಷಿ ಮಹಾವಿದ್ಯಾಲಯ ನಿರ್ಮಾಣವಾದರೆ ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳ ಉತ್ತಮ ಕೃಷಿ ವಿಜ್ಞಾನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಲ್ಲಿ ಚರ್ಚಿಸುವುದಾಗಿ ಅವರು ತಿಳಿಸಿದರು.
ಕೊರೊನಾದಿಂದಾಗಿ ಬೇರೆ ಎಲ್ಲಾ ಕ್ಷೇತ್ರಗಳಿಗೆ ನಷ್ಟ ಆಗಿದೆ. ಆದರೆ, ಕೃಷಿ ಕ್ಷೇತ್ರ ತನ್ನ ವ್ಯಾಪಕತೆಯನ್ನು ವಿಸ್ತರಿಕೊಳ್ಳುತ್ತ ಹೆಚ್ಚು ಹೆಚ್ಚು ಜನರು ಕೃಷಿಯ ಕಡೆಗೆ ಒಲವು ತೋರಿರುವುದನ್ನು ಗಮನಿಸಿದ್ದೇವೆಂದು ಸಚಿವರು ಹೇಳಿದರು.