ಶಿವಮೊಗ್ಗ : ಬ್ರಾಹ್ಮಣ ಸಮಾಜದ ಹೆಣ್ಣು ಮಕ್ಕಳು ಇತರೆ ಜಾತಿಯವರನ್ನು ವಿವಾಹ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪೇಜಾವರ ಮಠದ ಸ್ವಾಮಿಯವರು, ಬ್ರಾಹ್ಮಣ ಸಮಾಜದ ಹೆಣ್ಣುಮಕ್ಕಳು ಇತರ ಜಾತಿ, ಧರ್ಮದ ಯುವಕರನ್ನು ಮದುವೆಯಾಗುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಬ್ರಾಹ್ಮಣರ ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಕಲಿಸುವುದು ಇಂದಿನ ಅಗತ್ಯವಾಗಿದೆ, ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯನ್ನು ಒಳಗೊಂಡ ಮಾತೃಮಂಡಳಿ ರಚಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇದಕ್ಕೊಂದು ಪರಿಹಾರ ಹುಡುಕಬೇಕಿದೆ. ಬ್ರಾಹ್ಮಣ ಸಮಾಜದ ಹೆಣ್ಣು ಮಕ್ಕಳು ಇತರೆ ಜಾತಿಯವರನ್ನು ವರಿಸುತ್ತಿರುವುದರ ಹಿಂದಿನ ಸಮಸ್ಯೆಯನ್ನು ನಾವು ತಿಳಿಯಬೇಕು. ಬ್ರಾಹ್ಮಣ ಸಮುದಾಯದ ಜನಸಂಖ್ಯೆ ಇಳಿಮುಖವಾಗಿದೆ. ಈ ಕುರಿತು ಚಿಂತನೆ ನಡೆಯಬೇಕಿದೆ ಎಂದು ಹೇಳಿದ್ದಾರೆ.