ಮಾರುಕಟ್ಟೆಗಳಲ್ಲಿ ಕೋವಿಡ್ ರೂಲ್ಸ್ ಬ್ರೇಕ್| ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಸೂಚನೆ

Prasthutha|

ಹೊಸದಿಲ್ಲಿ: ಗಿರಿಧಾಮಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ ನಿಯಮಗಳನ್ನು ಉಲ್ಲಂಘನೆಯಾತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹಸಚಿವಾಲಯ ಸೂಚನೆ ನೀಡಿದೆ.

- Advertisement -

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳಿಗೆ ಈ ಕುರಿತು ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ‘ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಕೋವಿಡ್ ನಿಯಮಗಳು ಪಾಲನೆಯಾಗುತ್ತಿಲ್ಲ. ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಭಾರಿ ಸಂಖ್ಯೆಯಲ್ಲಿ ಗುಂಪುಗೂಡುತ್ತಿದ್ದು, ದೈಹಿಕ ಅಂತರವನ್ನೇ ಮರೆತಿದ್ದಾರೆ. ಕೋವಿಡ್‌ 2ನೇ ಅಲೆ ಇನ್ನೂ ಮುಗಿದಿಲ್ಲ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರಿಂದ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಿವೆ. ಆದರೆ, ಕೋವಿಡ್ ನಿಯಮ ಸಡಿಲಿಕೆ ಮಾಡುವಾಗ ಎಚ್ಚರಿಕೆಯ ಕ್ರಮಗಳನ್ನೂ ಗಮನದಲ್ಲಿರಿಸಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

Join Whatsapp