ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ಇಂದು ( ಜುಲೈ 5 ) ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಮಂಗಳವಾರ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.