ಲಂಚ ಪ್ರಕರಣ: ಲೋಕಾಯುಕ್ತ ಮುಂದೆ ಹಾಜರಾದ ಬಿಜೆಪಿ ಶಾಸಕ ಮಾಡಾಳ್

Prasthutha|

ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರು ಲೋಕಾಯುಕ್ತ ಕಚೇರಿ ಮುಂದೆ ಹಾಜರಾಗಿದ್ದಾರೆ.

- Advertisement -


ನಿರೀಕ್ಷಣಾ ಜಾಮೀನು ಪಡೆದು 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶಿತ್ತು. ಅದರಂತೆ ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ ಮಾಡಾಳ್, ತಮ್ಮ ವಕೀಲ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿ ಲೋಕಾಯುಕ್ತ ಕಚೇರಿಗೆ ತೆರಳಿದ್ದಾರೆ.


ನಿನ್ನೆಯಷ್ಟೇ ಇನ್ಸ್ ಪೆಕ್ಟರ್ ಮಹದೇವಯ್ಯ ನೇತೃತ್ವದ ಅಧಿಕಾರಿಗಳ ತಂಡವು ಮಾಡಾಳ್ ವಿರುಪಾಕ್ಷಪ್ಪ ನಿವಾಸಕ್ಕೆ ಬಂದು ಪರಿಶೀಲನೆ ನಡೆಸುತಿತ್ತು.



Join Whatsapp