Home ಟಾಪ್ ಸುದ್ದಿಗಳು ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.


ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ ಮಂಗಳವಾರ ನಡೆಸಿ, ಈ ತೀರ್ಪು ನೀಡಿದೆ.

ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ನಿರ್ದೇಶನ ನೀಡಿ ಮಾರ್ಚ್ 17ಕ್ಕೆ ವಿಚಾರಣೆ ಮುಂದೂಡಿದೆ.

Join Whatsapp
Exit mobile version