ಲಂಚ ಪ್ರಕರಣ: ವಿಚಾರಣೆಗೆ ಹಾಜರಾಗಲು ಕೇರಳ ಬಿಜೆಪಿ ರಾಜ್ಯಾಧ್ಯಕ್ಷನಿಗೆ ನೋಟಿಸ್

Prasthutha|

ತಿರುವನಂತಪುರಂ: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

- Advertisement -


ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಕೆ ಸುರೇಂದ್ರನ್ ಬಿಜೆಪಿಯಿಂದ ಸ್ಪರ್ಧಿಸಿದ್ದರು. ತಮ್ಮ ಎದುರಾಳಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳಲು ಪ್ರಭಾವ ಬೀರಿ, ಲಂಚ ನೀಡಿದ ಆರೋಪ ಸುರೇಂದ್ರನ್ ಮೇಲಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸುರೇಂದ್ರನ್ ವಿರುದ್ಧ ಚುನಾವಣಾ ಆಕ್ರಮ ಆರೋಪ ಕೇಳಿ ಬಂದಿದ್ದು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಿಸಲು ಕಾಸರಗೋಡು ಕೋರ್ಟ್ ಸಮ್ಮತಿ ನೀಡಿದೆ.

- Advertisement -


ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸಿದ್ದ ಸಿಪಿಐ (ಎಂ) ಅಭ್ಯರ್ಥಿ ವಿವಿ ರಮೇಶನ್ ಎಂಬುವರು ದೂರು ದಾಖಲಿಸಿದ್ದರು. ಈಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸುರೇಂದ್ರನ್ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಸೂಚಿಸಿತ್ತು.
ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ಕೆ ಸುಂದರಾ ಅವರು ನಾಮಪತ್ರ ಹಿಂಪಡೆಯಲು ಬೆದರಿಕೆ ಹಾಗೂ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ರಮೇಶನ್ ಎಂಬುವರು ದೂರು ದಾಖಲಿಸಿದ್ದರು. ಈ ಕುರಿತಂತೆ ಸುರೇಂದ್ರನ್ ರನ್ನು ಪ್ರಶ್ನಿಸಲು ನೋಟಿಸ್ ನೀಡಲಾಗಿದ್ದು, ವಿಚಾರಣೆ ನಡೆಸಲು ಕ್ರೈಂ ಬ್ರ್ಯಾಂಚ್ ಮುಂದಾಗಿದೆ.


ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರು ಸುರೇಂದ್ರನ್ ರನ್ನು 745 ಮತಗಳ ಅಂತರದಿಂದ 2021ರಲ್ಲಿ ಸೋಲಿಸಿದ್ದಾರೆ.

Join Whatsapp