‘ಲಂಚಾವತಾರ’ ಪ್ರಕರಣ | ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1 ಆರೋಪಿ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

Prasthutha|

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಎ1 ಆರೋಪಿಯಾಗಿದ್ದು, ಅವರ ಪುತ್ರ ಪ್ರಶಾಂತ್ ಮಾಡಾಳ್ ಎ2 ಆರೋಪಿಯಾಗಿರುವುದು ಬಯಲಾಗಿದೆ.

- Advertisement -


ಶ್ರೇಯಸ್ ಕಶ್ಯಪ್ ಕೆಮಿಕಲ್ ಹೆಸರಿನ ಕಂಪನಿಯ ಪಾಲುದಾರ ನೀಡಿದ ದೂರಿನ ಅನ್ವಯ ಎ1 ಆರೋಪಿಯಾಗಿ ವಿರೂಪಾಕ್ಷಪ್ಪ ಮಾಡಾಳ್, ಎ 2 ಆರೋಪಿ ಪ್ರಶಾಂತ ಮಾಡಾಳ್, ಲೆಕ್ಕಾಧಿಕಾರಿ ಸುರೇಂದ್ರ, ಪ್ರಶಾಂತ ಮಾಡಾಳ್ ಸಂಬಂಧಿ ಸಿದ್ದೇಶ್, ಕರ್ನಾಟಕ ಅರೋಮಾಸ್ ಕಂಪನಿಯ ಸಿಬ್ಬಂದಿಗಳಾದ ಆಲ್ಬರ್ಟ್ ನಿಕೋಲಾ, ಗಂಗಾಧರ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ.


ಟೆಂಡರ್ ಗಾಗಿ 40 ಲಕ್ಷ ರೂ ಲಂಚ ಪಡೆಯುವಾಗ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು. ಬಳಿಕ ಲೋಕಾಯುಕ್ತರು, ಬೆಂಗಳೂರಿನಲ್ಲಿರುವ ಪ್ರಶಾಂತ್ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ, ಕೋಟಿ ಕೋಟಿ ಹಣ ಪತ್ತೆಯಾಗಿತ್ತು.

Join Whatsapp