ವಿಜಯನಗರ: ಆರತಕ್ಷತೆ ವೇಳೆ ಮದುಮಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬುಧವಾರ ಸಂಜೆ ಹೊನ್ನೂರ ಸ್ವಾಮಿ ಅವರ ಮದುವೆ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನ ಕೂಡಲೇ ಸಮೀಪದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮದುಮಗ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.