ಸರ್ಕಾರ ಬೀಳಿಸುತ್ತೇವೆ ಎನ್ನುವುದು ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು: ಸಚಿವ ಎಚ್.ಕೆ. ಪಾಟೀಲ್

Prasthutha|

ಮೈಸೂರು: ಬಹುಮತದಲ್ಲಿ ಆರಿಸಿ ಬಂದು ರಚನೆಯಾದ ಸರ್ಕಾರವನ್ನು ಬೀಳಿಸುತ್ತೇವೆ ಎಂಬ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

- Advertisement -

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪಥನವಾಗುತ್ತೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿ ಸರ್ಕಾರವನ್ನು ಅಲುಗಾಡಿಸಲು ಮುಂದಾಗೋದು ಯಾವ ನೈತಿಕತೆ? ನಾವು ಗಟ್ಟಿಯಾಗಿದ್ದೇವೆ, ಆ ರೀತಿ ಏನೂ ಆಗಲ್ಲ ಅದು ಬೇರೆ ವಿಷಯ ಎಂದರು.

ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಿರುವಾಗ ವಿರೋಧ ಪಕ್ಷದವರಾಗಲಿ ಅಥವಾ ಯಾರೇ ಆಗಲಿ ಸರ್ಕಾರವನ್ನು ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.



Join Whatsapp