Home ಟಾಪ್ ಸುದ್ದಿಗಳು ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ನಿಧನ; ಒಂದು ದಿನ ಶೋಕಾಚರಣೆ ಘೋಷಿಸಿದ ಭಾರತ

ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ನಿಧನ; ಒಂದು ದಿನ ಶೋಕಾಚರಣೆ ಘೋಷಿಸಿದ ಭಾರತ

ನವದೆಹಲಿ: ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಬ್ರಿಟನ್ ಅನ್ನು ಸುದೀರ್ಘ ಕಾಲ ಆಳಿದ ರಾಣಿ ಎರಡನೇ ಎಲಿಜಬೆತ್ ತನ್ನ 96ನೇ ವಯಸ್ಸಿನಲ್ಲಿ ಸೆಪ್ಟೆಂಬರ್ 8 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ನಡೆಸಲು ನಿರ್ಧರಿಸಿದೆ.

ಶೋಕಾಚರಣೆಯ ದಿನದಂದು, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಆ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Join Whatsapp
Exit mobile version