Home ಕರಾವಳಿ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಮಂಗಳೂರು: ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಮಾಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್’ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯು.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್,  ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

Join Whatsapp
Exit mobile version