ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ರಾಷ್ಟ್ರ ಸಮಿತಿಯ (ಬಿಆರ್ ಎಸ್) ಹಾಗೂ ಬಹುಜನ ಸಮಾಜ ಪಕ್ಷವು (ಬಿಎಸ್ ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಇಂದು (ಶುಕ್ರವಾರ) ಘೋಷಿಸಿದ್ದಾರೆ.
‘ನಾಗರ್ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್ಪಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.