ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಲಾಗಿದೆ.
ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ಎಂಎಲ್ ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಕೊಠಡಿಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ.