ಮಕ್ಕಳ ಮುಂದೆಯೇ ಪತ್ನಿಯನ್ನು ಹತ್ಯೆಗೈದ ಕ್ರೂರ ಪತಿ

Prasthutha|

ಮಂಡ್ಯ: ಮಕ್ಕಳ ಮುಂದೆಯೇ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಯೋಗಿತಾ (27) ಪತಿಯಿಂದಲೇ ಹತ್ಯೆಯಾದ ಮಹಿಳೆ. ಅನ್ಯ ಸ್ತ್ರೀ ಜೊತೆ ರವಿಗೆ ಅನೈತಿಕ ಸಂಬಂಧ ಇತ್ತು. ಇದು ಪತ್ನಿಗೂ ತಿಳಿದಿತ್ತು. ಈ ಬಗ್ಗೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ರವಿ ಮನೆ ಬಿಟ್ಟು ಹೋಗುವಂತೆ ಪತ್ನಿಗೆ ಪದೇಪದೆ ಹಿಂಸೆ ನೀಡುತ್ತಿದ್ದನು ಎಂದು ಹೇಳಲಾಗಿದೆ.
ಪತಿ-ಪತ್ನಿ ನಡುವಿನ ಜಗಳ ಸಂಬಂಧ ಸಾಕಷ್ಟು ಬಾರಿ ಗ್ರಾಮದ ಮುಖಂಡರು ನ್ಯಾಯ ಪಂಚಾಯಿತಿಯನ್ನು ನಡೆಸಿದ್ದರು. ಆದರೂ ಜಗಳ ಮಾತ್ರ ನಿಂತಿರಲಿಲ್ಲ.

- Advertisement -

ನಿನ್ನೆ ರಾತ್ರಿಯೂ ಗಂಡ ಹೆಂಡತಿ ನಡುವೆ ಮತ್ತೆ ಜಗಳ ಆರಂಭವಾಗಿತ್ತು. ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ ರವಿ ಪತ್ನಿ ಯೋಗಿತಾಗೆ ಮನಬಂದಂತೆ ಥಳಿಸಿದ್ದಾನೆ. ಬಳಿಕ ಪತ್ನಿಯನ್ನು ಕೋಣೆಯೊಳಗೆ ಕೂಡಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp