ಗಂಡನ ಮನೆಯವರ ಚಿತ್ರಹಿಂಸೆ: 6 ಮಕ್ಕಳನ್ನು ಬಾವಿಗೆ ಎಸೆದು ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Prasthutha|

ಮುಂಬೈ: ಗಂಡನ ಮನೆಯವರು ಚಿತ್ರಹಿಂಸೆ ನೀಡಿ ಥಳಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ ಐವರು ಪುತ್ರಿಯರು, ಓರ್ವ ಪುತ್ರ ಸೇರಿ ಆರು ಮಕ್ಕಳನ್ನು ಬಾವಿಗೆ ಎಸೆದು ಹತ್ಯೆಗೈದಿರುವ ಘಟನೆ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ಆರು ಮಕ್ಕಳನ್ನು ಬಾವಿಗೆ ಎಸೆದ ತಾಯಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು ಆಕೆಯನ್ನು ರಕ್ಷಿಸಲಾಗಿದೆ.
ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿರುವ ರಾಯಗಢ ಜಿಲ್ಲೆಯ ಮಹಾಡ್ ತಾಲೂಕಿನ ಖರಾವಲಿ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಈ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
30 ವರ್ಷದ ಮಹಿಳೆ ಮೇಲೆ ಆಕೆಯ ಗಂಡನ ಮನೆಯವರು ಚಿತ್ರಹಿಂಸೆ ನೀಡಿ ಥಳಿಸಿದ ಹಿನ್ನೆಲೆಯಲ್ಲಿ ಮಹಿಳೆ ಈ ನಿರ್ಧಾರ ಕೈಗೊಂಡಿದ್ದಾಳೆ. ಅಲ್ಲದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಎಲ್ಲಾ ಮಕ್ಕಳು 18 ತಿಂಗಳಿಂದ 10 ವರ್ಷದೊಳಗಿನವರಾಗಿದ್ದಾರೆ ಎಂದು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ತಲುಪಿರುವ ಪೊಲೀಸರು ಈಗಾಗಲೇ ಎಲ್ಲ ಮೃತದೇಹಗಳನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದು. ತನಿಖೆ ಮುಂದುವರೆದಿದೆ. ಮಕ್ಕಳ ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Join Whatsapp