BSF ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಿದ ಕೇಂದ್ರ ಸರ್ಕಾರ

Prasthutha|

ಹೊಸದಿಲ್ಲಿ: ಕೇಂದ್ರ ಗೃಹ ಸಚಿವಾಲಯವು BSFನ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಿದೆ.
ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆ ತನ್ನ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿದೆ. ಇಂದಿನಿಂದ, ಸೇನೆಗೆ ಗಡಿಯಿಂದ 50 ಕಿಮೀ ಒಳಗೆ ಬಂದು ತಪಾಸಣೆ ನಡೆಸಬಹುದು.

- Advertisement -

ಮೊದಲು ಈ ರಾಜ್ಯಗಳ ಗಡಿಯಲ್ಲಿ BSF 15 ಕಿಮೀ ವ್ಯಾಪ್ತಿಯನ್ನು ಹೊಂದಿತ್ತು. ಜನರನ್ನು ಬಂಧಿಸುವ ಅಧಿಕಾರವನ್ನು BSF ಹೊಂದಿದೆ.
ರಾಜ್ಯಗಳ ನಡುವಿನ ಗಡಿ ವಿವಾದ ಹೆಚ್ಚುತ್ತಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

BSFಗೆ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಫೆಡರಲಿಸಂ ಮೇಲೆ ನೇರ ದಾಳಿಯಾಗಿದ್ದು, ಈ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

Join Whatsapp