ಹೊಸದಿಲ್ಲಿ: ಪಂಜಾಬ್‌ನ ಭಾರತ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಡ್ರೋನ್ ಅನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಗಡಿಯ 300 ಮೀಟರ್ ದೂರದಲ್ಲಿ ಚೀನಾ ನಿರ್ಮಿತ ಡ್ರೋನ್ ಪತ್ತೆಯಾಗಿದ್ದು, ಬ್ಯಾಟರಿ ಚಾಲಿತ 23 ಕೆ.ಜಿ. ಭಾರವಿರುವ ಮತ್ತು 10 ಕೆ.ಜಿ ತೂಕವನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಡ್ರೋನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಹಿರಿಯ ಮಿಲಿಟರಿ ಅಧಿಕಾರಿಗಳು ಡ್ರೋನ್ ಪರೀಕ್ಷೆಯನ್ನು ಪ್ರಾರಂಭಿಸಿದ್ದು, ಡ್ರೋನ್ ನಲ್ಲಿ ಯಾವುದೇ ವಸ್ತುಗಳನ್ನು ಇರಿಸಲಾಗಿದೆಯೇ ಎಂಬುದನ್ನು ಕಂಡುಹಿಡಿಯಲು ಸೈನಿಕರು ಪ್ರಯತ್ನಿಸುತ್ತಿದ್ದಾರೆ ಎಂದು ಬಿಎಸ್‌ಎಫ್ ತಿಳಿಸಿದೆ.
ಈ ವರ್ಷವೊಂದರಲ್ಲೇ ಗಡಿ ಪ್ರದೇಶದಲ್ಲಿ 67 ಬಾರಿ ಡ್ರೋನ್ ಪತ್ತೆಯಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.