ಉತ್ತರಪ್ರದೇಶ: ತಮ್ಮ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಬಹುಜನ ಸಮಾಜ ಪಕ್ಷ (BSP) ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ತಾನು ರಾಜಕೀಯದಿಂದ ನಿವೃತ್ತಿಯಾಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದೂ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಹುಜನ ಸಮಾಜ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.