ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

Prasthutha|

ಲಖನೌ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಬಿಎಸ್‌ಪಿ ಪದಾಧಿಕಾರಿಗಳಿಗಾಗಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

ಕೆಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಎನ್‌ಡಿಎ ಅಥವಾ ಇಂಡಿಯಾ ಮೈತ್ರಿಕೂಟಗಳ ಜೊತೆ ಸೇರಿಕೊಳ್ಳುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟಕ್ಕೆ ಬಿಎಸ್‌ಪಿಯನ್ನು ಕರೆತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಮಾಯಾವತಿ ಈ ಹೇಳಿಕೆ ನೀಡಿದ್ದು ಮಹತ್ವವನ್ನು ಪಡೆದುಕೊಂಡಿದೆ.

- Advertisement -

ಬಿಜೆಪಿ ಮತ್ತು ಕಾಂಗ್ರೆಸ್‌ ಎರಡನ್ನೂ ದೂರಿರುವ ಮಾಯಾವತಿ, ಎರಡು ಪಕ್ಷಗಳ ಜನವಿರೋಧಿ ನೀತಿಗಳಿಂದಾಗಿ ದೇಶದ ರಾಜಕೀಯ ಚಿತ್ರಣದಲ್ಲಿ ಬದಲಾವಣೆ ಕಂಡುಬರುತ್ತಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಬಿಎಸ್‌ಪಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ.

Join Whatsapp