ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿ ದ್ರೌಪದಿಗೆ ಬೆಂಬಲ ಸೂಚಿಸಿದ ಬಿಎಸ್ಪಿ

Prasthutha|

ಲಖನೌ: ರಾಷ್ಟ್ರಪತಿ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದ್ದು, ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು NDA ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬುಡಕಟ್ಟು ಸಮಾಜವು ಪಕ್ಷದ ಹೋರಾಟದ ಅಂಗವಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದು NDA ಗೆ ಬೆಂಬಲ ಸೂಚಿಸುವ ಅಥವಾ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಗೆ ವಿರೋಧ ವ್ಯಕ್ತಪಡಿಸುವ ನಿರ್ಧಾರವಲ್ಲ. ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿ ಆಯ್ಕೆ ಮಾಡುವ ಉದ್ದೇಶದಿಂದ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

ಅಲ್ಲದೇ ಪ್ರತಿಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸುವಾಗ ತಮ್ಮೊಂದಿಗೆ ಚರ್ಚೆ ನಡೆಸಿಲ್ಲ ಎಂದು ಆರೋಪಿಸಿದ ಮಾಯಾವತಿ, ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಪಕ್ಷವು ಸ್ವತಂತ್ರ ನಿರ್ಧಾರ ತೆಗೆಯಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್, ಟಿಎಂಸಿ ಮತ್ತು ಎನ್.ಸಿ.ಪಿ ಸೇರಿದಂತೆ ಹಲವು ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಕಣಕ್ಕಿಳಿಯಲಿದ್ದಾರೆ.

NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ದಿನಾಂಕ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳ ಮುಖಂಡರಿಗೆ ಕರೆ ಮಾಡಿ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

Join Whatsapp