ಬಿಎಸ್‌ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ

Prasthutha|

- Advertisement -

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ನಿನ್ನೆ ಪೆರಂಬೂರ್‌ನಲ್ಲಿರುವ ಅವರ ಮನೆಯ ಬಳಿ ಹತ್ಯೆ ಮಾಡಲಾಗಿದೆ.ಆರ್ಮ್‌ಸ್ಟ್ರಾಂಗ್ ಅವರನ್ನು ಆರು ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಸೇಂಬಿಯಂ ಪೊಲೀಸರ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.



Join Whatsapp