Home ಟಾಪ್ ಸುದ್ದಿಗಳು ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಸಂಸದನಿಗೆ ಕೊರೋನಾ ಸೋಂಕು ದೃಢ

ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಸಂಸದನಿಗೆ ಕೊರೋನಾ ಸೋಂಕು ದೃಢ

ನವದೆಹಲಿ: ಲೋಕಸಭಾ ಕಲಾಪದಲ್ಲಿ ಭಾಗಿಯಾಗಿದ್ದ ಬಿಎಸ್‍ಪಿ ಸಂಸದ ಡ್ಯಾನಿಶ್ ಅಲಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಡ್ಯಾನಿಶ್ ಅಲಿ ಟ್ವೀಟ್ ಮಾಡಿದ್ದು, ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ ಹೊರತಾಗಿ ಸೋಂಕು ದೃಢಪಟ್ಟಿದೆ.  ಸೋಮವಾರ ಕಲಾಪದಲ್ಲಿ ಭಾಗಿಯಾಗಿದ್ದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕ್ವಾರಂಟೈನ್‍ ಗೆ ಒಳಗಾಗಿ ಮತ್ತು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

ಕಲಾಪಕ್ಕೆ ಹಾಜರಾಗಿದ್ದ ಸಂಸದರಿಗೆ  ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.

Join Whatsapp
Exit mobile version