ಬಿಎಸ್ ಪಿ ಅಧ್ಯಕ್ಷ ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣ: 8 ಮಂದಿ ಪೊಲೀಸ್ ವಶಕ್ಕೆ

Prasthutha|

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ತಮಿಳುನಾಡು ಅಧ್ಯಕ್ಷ ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -


ಈ ಬಗ್ಗೆ ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಖಚಿತಪಡಿಸಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ತಿಳಿಯಲು ವಶಕ್ಕೆ ಪಡೆದುಕೊಂಡವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.


ಆರ್ಮ್ ಸ್ಟ್ರಾಂಗ್ ಅವರನ್ನು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಬೈಕಿನಲ್ಲಿ ಬಂದ ಆರು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.



Join Whatsapp