ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದ ಬಿಎಸ್‌ವೈ

Prasthutha|

ಬೆಂಗಳೂರು: 80 ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಡುಗಡೆಗೊಳಿಸಿದ್ದು, ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಕರ್ನಾಟಕದಿಂದ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ಸಂಸದ ಪ್ರಲ್ಹಾದ್ ಜೋಷಿ ಗೂ ಸ್ಥಾನ ನೀಡಲಾಗಿದೆ.

- Advertisement -

ಸಂಸದ ಉಮೇಶ್ ಜಾಧವ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ್, ಲಕ್ಷ್ಮಣ್ ಸವದಿಗೆ ವಿಶೇಷ ಆಹ್ವಾನಿತರ ಸ್ಥಾನ ನೀಡಲಾಗಿದೆ.

80 ಸದಸ್ಯರಲ್ಲದೆ, ಕಾರ್ಯಕಾರಣಿಯಲ್ಲಿ 50 ವಿಶೇಷ ಆಹ್ವಾನಿತರು ಮತ್ತು 179 ಖಾಯಂ ಆಹ್ವಾನಿತರು ಇರುತ್ತಾರೆ. 80 ಸದಸ್ಯರಲ್ಲಿ 37 ಮಂದಿ ಕೇಂದ್ರ ಸಚಿವರು ಮತ್ತು ಹಲವು ರಾಜ್ಯಗಳ ಸಚಿವರು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

Join Whatsapp