Home ಟಾಪ್ ಸುದ್ದಿಗಳು ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ | ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಎಜಿಗೆ ಸೂಚನೆ: ಪರಮೇಶ್ವರ್

ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ | ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಎಜಿಗೆ ಸೂಚನೆ: ಪರಮೇಶ್ವರ್

ಬೆಂಗಳೂರು: ‘ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆ ತೆರವು ಮಾಡಿಸಲು ಅಡ್ವೊಕೇಟ್‌ ಜನರಲ್‌ಗೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಕಾಲದಲ್ಲಿ ಸಾಕಷ್ಟು ಹಗರಣಗಳಾಗಿವೆ. ತನಿಖೆಗೆ ಆದೇಶ ಮಾಡಿದ್ದೇವೆ. ವರದಿಯನ್ನು ಆಧರಿಸಿ ಮುಂದಿನ ಕ್ರಮದ ಬಗ್ಗೆ ಕ್ಯಾಟಿನೆಟ್‌ನಲ್ಲಿ ನಿರ್ಧರಿಸುತ್ತೇವೆ” ಎಂದು ತಿಳಿಸಿದರು.

“ಮುಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು”‌ ಎಂದರು.

Join Whatsapp
Exit mobile version