Home ಟಾಪ್ ಸುದ್ದಿಗಳು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಮನೆಗೆ ಯಡಿಯೂರಪ್ಪ ಭೇಟಿ | ಕುಟುಂಬಕ್ಕೆ ಸಾಂತ್ವನ

ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಮನೆಗೆ ಯಡಿಯೂರಪ್ಪ ಭೇಟಿ | ಕುಟುಂಬಕ್ಕೆ ಸಾಂತ್ವನ

ಗುಂಡ್ಲುಪೇಟೆ, ಜು.30: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಕಟ್ಟಾ ಬೆಂಬಲಿಗ ಗುಂಡ್ಲುಪೇಟೆಯ ಬೊಮ್ಮಲಾಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರವಿ ಅವರ ಮನೆಗೆ ಶುಕ್ರವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು.


ಆತ್ಮಹತ್ಯೆ ವಿಷಯ ತಿಳಿದ ತಕ್ಷಣ ಯಡಿಯೂರಪ್ಪ ಅವರು ಕುಟುಂಬ ಸದಸ್ಯರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು. ಮಾತ್ರವಲ್ಲ ಶೀಘ್ರ ಮನೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಆಗಮಿಸಿದಾಗ ರವಿ ಅವರ ಮನೆಗೆ ಆಗಮಿಸಿದ್ದಾರೆ.

Join Whatsapp
Exit mobile version