ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ವೈ ಆಪ್ತ, ಬಿಜೆಪಿ ಮಾಜಿ ಶಾಸಕ ಯು.ಬಿ.ಬಣಕಾರ್

Prasthutha|

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಶಾಸಕ ಯು.ಬಿ.ಬಣಕಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -


ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಬಣಕಾರ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರಾಗಿದ್ದಾರೆ.

ತಾಲೂಕಿನಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ತೊರೆದಿದ್ದಾರೆ. ಎದುರಾಳಿಯಾಗಿದ್ದ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬಣಕಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ದಿನಗಳ ಹಿಂದೆ ಬಣಕಾರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದರು. ಬಳಿಕ ಕ್ಷೇತ್ರದ ಮುಖಂಡರ ಬಳಿ ಚರ್ಚಿಸಿ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದರು. ಅದರಂತೆ ಇಂದು ಅವರು ಕಾಂಗ್ರೆಸ್ ಸೇರಿದ್ದಾರೆ.

Join Whatsapp