Home ಟಾಪ್ ಸುದ್ದಿಗಳು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌’ವೈ ಕುಟುಂಬ

ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌’ವೈ ಕುಟುಂಬ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶಿಕಾರಿಪುರ ತಾಲೂಕು ಕಚೇರಿಯ ಮತಗಟ್ಟೆ ಕೇಂದ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಮಂಗಳವಾರ ಮತ ಚಲಾಯಿಸಿದರು.

ಮತದಾನಕ್ಕೂ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ ಅವರು ಹುಚ್ಚರಾಯಸ್ವಾಮಿ ದರ್ಶನ ಪಡೆದರು.

ಮತದಾನದ ಬಳಿಕ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಉತ್ತಮ ವಾತಾವರಣ ಇದೆ. ರಾಘವೇಂದ್ರ ಎರಡೂವರೆ ಲಕ್ಷ ಲೀಡ್‌ನಲ್ಲಿ ಗೇಲ್ತಾರೆ. ಇಂದು ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರದಲ್ಲಿ 14 ಕ್ಷೇತ್ರ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Join Whatsapp
Exit mobile version