►ಮುದ್ರಾ ಲೋನ್ ಮಿತಿ ₹10 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಳ
ನವದೆಹಲಿ: NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆ ಟ್ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್ ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ.
ಮುದ್ರಾ ಲೋನ್ ಮಿತಿ ₹10 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. 26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದ ಅವರು, ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದರು.
2.66 ಲಕ್ಷ ಕೋಟಿ ಮೀಸಲು ದೇಶಾದಾದ್ಯಂತ ಗ್ರಾಮೀಣಾಭಿವೃದ್ಧಿಗೆ ಒತ್ತು