Home ಟಾಪ್ ಸುದ್ದಿಗಳು Budget 2024 | ಆದಾಯ ತೆರಿಗೆ ದರಗಳಲ್ಲಿ ಯಥಾಸ್ಥಿತಿ: ನಿರ್ಮಲಾ ಸೀತಾರಾಮನ್

Budget 2024 | ಆದಾಯ ತೆರಿಗೆ ದರಗಳಲ್ಲಿ ಯಥಾಸ್ಥಿತಿ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ.

►ಬಜೆಟ್ ಮುಖ್ಯಾಂಶಗಳು


ಲಕ್ಷದ್ವೀಪ ಸೇರಿದಂತೆ ದ್ವೀಪಗಳಲ್ಲಿ ಬಂದರು ಸಂಪರ್ಕ, ಸೌಕರ್ಯಗಳಿಗಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು, ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಿಸಲಾಗುವುದು


ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು


ತೆರಿಗೆ ದರಗಳಲ್ಲಿ ಯಥಾಸ್ಥಿತಿ ಇರಲಿದೆ.


ಆಯುಷ್ಮಾನ್ ಭಾರತ ಯೋಜನೆಯನ್ನು ವಿಸ್ತರಿಸಲಾಗುವುದು. ಈ ಯೋಜನೆ ಇನ್ನುಮುಂದೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೂ ಅನ್ವಯವಾಗಲಿದೆ


ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ

ಸದ್ಯ ಇರುವ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಆದ್ಯತೆ ನೀಡಲಿದೆ

ಅರ್ಹ ಮಧ್ಯಮ ವರ್ಗದ ಜನರಿಗಾಗಿ ಮನೆ ಕೊಳ್ಳಲು ಅಥವಾ ಮನೆ ಕಟ್ಟಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಸತಿ ಯೋಜನೆ ಜಾರಿಗೆ ತರಲಾಗುವುದು.

ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.


Join Whatsapp
Exit mobile version