ನವದೆಹಲಿ: ಆಡಳಿತಾರೂಢ ಎನ್ ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ.
ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.
ನಿರ್ಮಲಾ ಸೀತಾರಾಮನ್ ಮಂಗಳವಾರದಂದು ಸತತ 7ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ.
ಈ ಬಜೆಟ್ ಮಂಡನೆ ಮೂಲಕ ಅವರು ಹೊಸ ದಾಖಲೆ ಬರೆಯಲಿದ್ದಾರೆ. ಹಣಕಾಸು ಸಚಿವರಾಗಿ ಸತತ 6 ಬಜೆಟ್ ಮಂಡಿಸಿದ್ದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಸಾಧನೆಯನ್ನ ನಿರ್ಮಲಾ ಸೀತಾರಾಮನ್ ಹಿಂದಿಕ್ಕಲಿದ್ದಾರೆ.