ರಾಜ್ಯ ಸರ್ಕಾರಿ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಬಜೆಟ್: ನೌಕರರ ಸಂಘ

Prasthutha|

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರರನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ವಿಫಲವಾಗಿರುವ ಬಜೆಟ್ ಇದಾಗಿದೆ ಎಂದು ಸಚಿವಾಲಯ ನೌಕರರ ಸಂಘ ಪ್ರತಿಕ್ರಿಯಿಸಿದೆ.

- Advertisement -

ರಾಜ್ಯದ 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿ ವೇತನವನ್ನು ನೀಡುವ ಕುರಿತಂತೆ ಯಾವುದೇ ಪ್ರಸ್ತಾಪ ಮಾಡದೇ ರಾಜ್ಯ ಸರ್ಕಾರಿ ನೌಕರರನ್ನು ಕಡೆಗಣಿಸಿರುವುದು ಸಮಸ್ತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯನ್ನುಂಟು ಮಾಡಿರುವುದಾಗಿ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಸ್ತುತ ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಶೇ.33ರಷ್ಟು ವೇತನವನ್ನು ಹೆಚ್ಚಿಗೆ ಮಾಡಿದ್ದರೂ ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ನಡುವೆ ಸಾಕಷ್ಟು ವೇತನ ತಾರತಮ್ಯ ಇರುತ್ತದೆ. ಕೋವಿಡ್ -19 ಸಂಕಷ್ಟದ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ಗಳಾಗಿ ದುಡಿಯುವುದರ ಜೊತೆಗೆ ತಮ್ಮ ವೇತನವನ್ನು ಕೋವಿಡ್ ಸಂದರ್ಭದಲ್ಲಿಯೂ ಸೇರಿದಂತೆ ಪ್ರಾಕೃತಿಕ ವಿಕೋಪಗಳಾದ ಸಂದರ್ಭಗಳಲ್ಲಿಯೂ ರಾಜ್ಯ ಸರ್ಕಾರಿ ನೌಕರರು ತಮ್ಮ  ವೇತನವನ್ನು ನೀಡಿ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ.ಆದರೆ ಸರ್ಕಾರ ಇದ್ಯಾವುದನ್ನೂ ಪರಿಗಣಿಸದೇ ಕೃತಘ್ನತಾಭಾವವನ್ನು ತೋರಿರುವುದು ಈ ಬಜೆಟ್ನಲ್ಲಿ ವ್ಯಕ್ತಪಡಿಸಿದೆ.

- Advertisement -

ತಮ್ಮ ಜೀವದ ಹಂಗನ್ನು ತೊರೆದು ಸಾರ್ವಜನಿಕರ ರಕ್ಷಣೆಗೆ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರೂ ಸಹ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯವನ್ನು ಸರಿಪಡಿಸದ ಮಲತಾಯಿ ಧೋರಣೆ ಅನುಸರಿಸುತ್ತಿರುವುದನ್ನು ಸಚಿವಾಲಯ ನೌಕರರ ಸಂಘವು ತೀವ್ರವಾಗಿ ಖಂಡಿಸುವುದಾಗಿ ಗುರುಸ್ವಾಮಿ ಹೇಳಿದ್ದಾರೆ.

ಸರ್ಕಾರದ ಈ ಸರ್ಕಾರಿ ನೌಕರರ ವಿರೋಧಿ ನೀತಿ ಹಾಗೂ ಅನ್ಯಾಯವನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎನ್.ಪಿ.ಎಸ್ ಸಂಘ , ಕರ್ನಾಟಕ ವಿಧಾನ ಸಭೆ ಸಚಿವಾಲಯ ನೌಕರರ ಸಂಘ , ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ನೌಕರರ ಸಂಘ ಹಾಗೂ ಇನ್ನಿತರೆ ವೃಂದ ಸಂಘಗಳು ಸೇರಿ ಹೋರಾಟ ನಡೆಸಲು ಕ್ರಿಯಾ ಸಮಿತಿಯನ್ನು ರಚಿಸಿ ಉಗ್ರ ಹೋರಾಟ ನಡೆಸುವುದಾಗಿ ಗುರುಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Join Whatsapp