ಕಣ್ಣಿಗೆ ಖಾರದ ಪುಡಿ ಎರಚಿ ಬಿಲ್ಡರ್ ಬರ್ಬರ ಹತ್ಯೆ..!

Prasthutha|

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಯೊಬ್ಬನ್ನು ಹತ್ಯೆ ಮಾಡಿರುವ ಘಟನೆ ನಗರದ ಗುರುಪ್ರಸಾದ್ ಕಾಲೊನಿಯಲ್ಲಿ ನಡೆದಿದೆ.

- Advertisement -

ಬಿಲ್ಡರ್ ರಾಜು ದೊಡ್ಡಬಣ್ಣವರ (46) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ನೋಡಲು ರಾಜು ತಮ್ಮ ಕಾರಿನಲ್ಲಿ ಹೊರಟಿದ್ದರು. ಆಗ ರಾಜು ಅವರ ಕಾರು ತಡೆದಿರುವ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

- Advertisement -

ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವ ಕಂಡ ವಾಯುವಿಹಾರ ಮಾಡುತ್ತಿದ್ದ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಹತ್ಯೆಗೆ ಹಳೇ ದ್ವೇಷ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Join Whatsapp