ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿದು ಹಲವು ಸಾವು ನೋವುಗಳುಂಟಾದ ಘಟನೆ ಭಿವಂಡಿಯಲ್ಲಿ ನಡೆದಿದೆ.
ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಎರಡು ಅಂತಸ್ತಿನ ಕಟ್ಟಡ ಕುಸಿದಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಭಿವಂಡಿ ಅಗ್ನಿಶಾಮಕ ದಳ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್ಡಿಎಂಸಿ) ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ.
ಕೆಲವು ಕಾರ್ಮಿಕರು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಕನಿಷ್ಠ 10 ಮಂದಿ ಅವಶೇಷಗಳಡಿ ಸಿಲುಕಿರಬಹುದು ಎಂದು ಆರ್ಡಿಎಂಸಿ-ಟಿಎಂಸಿ ಮುಖ್ಯಸ್ಥ ಅವಿನಾಶ್ ಸಾವಂತ್ ಹೇಳಿದ್ದಾರೆ.