ಬೆಂಗಳೂರು ಮತ್ತೊಂದು ಕಟ್ಟಡ ಕುಸಿತ: 18 ಕುಟುಂಬಗಳು ಪಾರು

Prasthutha|

ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಲ್ಲಿ ಒಂದಲ್ಲ ಒಂದು ಅನಾಹುತಗಳು ನಡೆಯುತ್ತಲೇ ಇವೆ. ನಿನ್ನೆಯಷ್ಟೇ ವಿಲ್ಸನ್ ಗಾರ್ಡನ್ ಬಳಿಯ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿದ ಪ್ರಕರಣದ ಬೆನ್ನಲ್ಲೇ ಮಂಗಳವಾರ ಡೈರಿ ವೃತ್ತ ಬಳಿಯ ಕೆಎಂಎಫ್ ಕ್ವಾಟರ್ಸ್ನಲ್ಲಿರುವ ಮೂರು ಅಂತಸ್ತಿನ ಕಟ್ಟಡ ಭಾಗಶಃ ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಪರಿಹಾರ ಕೈಗೊಂಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -


ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ಈ ಹಳೆಯ ಕ್ವಾಟರ್ಸ್ನಲ್ಲಿ 18 ಮನೆಗಳಿದ್ದು ಎಲ್ಲವೂ ಖಾಲಿ ಉಳಿದಿದ್ದವು. ನಿನ್ನೆಯಷ್ಟೇ ವಿಲ್ಸನ್ ಗಾರ್ಡನ್ ಬಳಿಯ ಲಕ್ಕಸಂದ್ರದಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿದ ಘಟನೆ ನಡೆದಿತ್ತು.

Join Whatsapp