ಹೈಕೋರ್ಟ್ ಆದೇಶದ ಬಳಿಕ ನುಹ್ ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

Prasthutha|

ದೆಹಲಿ: ತೀವ್ರ ಗಲಭೆ ಹಿನ್ನೆಲೆಯಲ್ಲಿ ಹರ್ಯಾಣದ ನುಹ್ ನಲ್ಲಿ ನಡೆಯುತ್ತಿದ್ದ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮೇರೆಗೆ ಇಂದು (ಸೋಮವಾರ) ಸ್ಥಗಿತಗೊಳಿಸಲಾಗಿದೆ.
ಹೈಕೋರ್ಟ್ ತೀರ್ಪಿನ ನಂತರ ಬುಲ್ಡೋಜರ್ ಕ್ರಮವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿ ಧೀರೇಂದ್ರ ಖಡ್ಗಟಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹರ್ಯಾಣದಲ್ಲಿ ಗಲಭೆ ಯಲ್ಲಿ 6 ಮಂದಿ ಸಾವಿಗೀಡಾದ ಒಂದು ವಾರದ ನಂತರ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದೆ.

- Advertisement -

ಇದು ಸಾಮಾನ್ಯ ಪ್ರಕ್ರಿಯೆ ಗಲಭೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಆಡಳಿತ ಹೇಳಿಕೆ ನೀಡಿದ್ದರೂ ಒಂದು ಸಮುದಾಯವನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು.



Join Whatsapp