ಉತ್ತರಪ್ರದೇಶದಲ್ಲಿ ಬುಲ್ಡೋಜರ್ ಬ್ಯಾನ್? : ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ!

Prasthutha|

ಲಕ್ನೋ : ಉತ್ತರಪ್ರದೇಶದಲ್ಲಿ ಅನಧಿಕೃತವಾಗಿ ಬುಲ್ಡೋಜರ್ ಹರಿಸಿ‌ಮೆರೆದಾಡುತ್ತಿರುವ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ನಾಳೆ ಅರ್ಜಿ ವಿಚಾರಣೆ ನಡೆಯಲಿದೆ

- Advertisement -

ಉತ್ತರ ಪ್ರದೇಶದ ವಿಚಾರವಾಗಿ ಜಮಿಯತ್ ಉಲೇಮಾ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯನ್ನು ನಾಳೆ ಉಚ್ಚ ನ್ಯಾಯಾಲಯ ವಿಚಾರಣೆಗೆ ಒಳಪಡಿಸಲಿದೆ.ಇದರೊಂದಿಗೆ ದೆಹಲಿಯ ಜಹಾಂಗೀರ್‌ಪುರಿ ಪ್ರಕರಣದಲ್ಲಿ ಮಸೀದಿಯ ಆವರಣದಲ್ಲಿ ಬುಲ್ಡೋಜರ್‌ಗಳ ಕಾರ್ಯಾಚರಣೆಯ ವಿರುದ್ಧವೂ ನ್ಯಾಯಾಲಯವು ವಿಚಾರಣೆ ನಡೆಸುತ್ತದೆ ಎನ್ನಲಾಗಿದೆ.

ಪ್ರಯಾಗ್‌ರಾಜ್‌ನಲ್ಲಿರುವ ಜಾವೇದ್ ಅಹ್ಮದ್ ಅವರ ಆಸ್ತಿಯ ಮೇಲಿನ ಅಕ್ರಮದ ನಂತರ ಜಮಿಯತ್ ಉಲೇಮಾ-ಎ-ಹಿಂದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಇನ್ನು ಮುಂದೆ ಯಾವುದೇ ನೆಲಸಮವನ್ನು ನಡೆಸದಂತೆ ನೋಡಿಕೊಳ್ಳಲು ಯುಪಿ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದೆ.

- Advertisement -

ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಕಾನೂನು ಮತ್ತು ಮುನ್ಸಿಪಲ್ ಕಾನೂನುಗಳನ್ನು ಉಲ್ಲಂಘಿಸಿ ಕೆಡವಲಾದ ಮನೆಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಸಂಘಟನೆಯು ತನ್ನ ಅರ್ಜಿಯಲ್ಲಿ ಮನವಿ ಮಾಡಿದ್ದು ಯುಪಿಯಲ್ಲಿ ಅನಧಿಕೃತ ಬುಲ್ಡೋಝರ್ ಬ್ಯಾನ್ ಆಗಲಿದೆಯೇ ಎಂದು ಕಾದು ನೋಡಬೇಕಾಗಿದೆ.



Join Whatsapp