ನವದೆಹಲಿ: ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸದೆ ರಾಜ್ಯದಲ್ಲಿ ಆಸ್ತಿಗಳ ನೆಲಸಮವನ್ನು ನಡೆಸದಂತೆ ನೋಡಿಕೊಳ್ಳಲು ಉತ್ತರ ಪ್ರದೇಶದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಜಮಿಯತ್-ಉಲಮಾ-ಇ-ಹಿಂದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಜೂನ್ 29 ಕ್ಕೆ ಮುಂದೂಡಿದೆ.
ಯುಪಿ ಸರ್ಕಾರದ ಅಫಿದವಿತ್ ಗೆ ಉತ್ತರಿಸಲು ಹೆಚ್ಚಿನ ಸಮಯವನ್ನು ಕೋರಿ ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲೆ ನಿತ್ಯಾ ರಾಮಕೃಷ್ಣನ್ ಅವರ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಮತ್ತು ಸುಧಾಂಶು ಧುಲಿಯಾ ಅವರ ರಜಾಕಾಲದ ಪೀಠವು ಪ್ರಕರಣವನ್ನು ಮುಂದೂಡಿತು.