ಭ್ರಷ್ಟಾಚಾರ ಆರೋಪ: ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಎಂಡಿ ಸತೀಶ್ ಅಗ್ನಿಹೋತ್ರಿ ವಜಾ

Prasthutha|

ನವದೆಹಲಿ: ಸರ್ಕಾರದ ಮಹತ್ವಾಕಾಂಕ್ಷಿ  ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಎಂಡಿ ‘ಸತೀಶ್ ಅಗ್ನಿಹೋತ್ರಿ ಅವರನ್ನು ಭ್ರಷ್ಟಾಚಾರ ಆರೋಪದಲ್ಲಿ  ವಜಾಗೊಳಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಒಂದು ವರ್ಷದ ಹಿಂದೆ ವಿಶೇಷ ಪ್ರಕರಣ ಮತ್ತು ಔಟ್-ಆಫ್-ಟರ್ನ್ ಆಧಾರದ ಮೇಲೆ ಹುದ್ದೆಗೆ ನೇಮಕಗೊಂಡಿದ್ದ ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಅವರ ಹುದ್ದೆಯನ್ನು ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದ್ದು, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವಂತೆ ನಿರ್ದೇಶಿಸಲಾಗಿದೆ” ಎಂದು NHSRCL ಕಂಪನಿ ಕಾರ್ಯದರ್ಶಿಗೆ ಜುಲೈ 7ರಂದು ರೈಲ್ವೆ ಮಂಡಳಿ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಯೋಜನಾ ವಿಭಾಗದ ನಿರ್ದೇಶಕ ರಾಜೇಂದ್ರ ಪ್ರಸಾದ್ ಅವರು ಮುಂದಿನ ಮೂರು ತಿಂಗಳವರೆಗೆ ಅಥವಾ ಮುಂದಿನ ಆದೇಶ ಬರುವವರೆಗೆ ಸಿಎಂಡಿ ಹೊಣೆಗಾರಿಕೆ ನಿಭಾಯಿಸಲಿದ್ದಾರೆ.

- Advertisement -

ಅಗ್ನಿಹೋತ್ರಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988 ರ ಅಡಿಯಲ್ಲಿ ಯಾವುದೇ ಅಪರಾಧವನ್ನು ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತು ಆರು ತಿಂಗಳೊಳಗೆ ಅಥವಾ ಡಿಸೆಂಬರ್ 12, 2022 ರೊಳಗೆ ತನಿಖಾ ವರದಿಯನ್ನು ಲೋಕಪಾಲ್ ಕಚೇರಿಗೆ ಸಲ್ಲಿಸುವಂತೆ ಲೋಕಪಾಲ್ ನ್ಯಾಯಾಲಯವು ಸಿಬಿಐಗೆ ನಿರ್ದೇಶನ ನೀಡಿದೆ.



Join Whatsapp