ಮುಂಬೈ: ಬುಲ್ಲಿ ಬಾಯಿ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಉತ್ತರಾಖಂಡದಲ್ಲಿ ಮತ್ತೊಬ್ಬ ವಿದ್ಯಾರ್ಥಿಯನ್ನು ಮುಂಬೈ ಸೈಬರ್ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ವಿದ್ಯಾರ್ಥಿಯನ್ನು ಮಯಾಂಕ್ ರಾವಲ್ ಎಂದು ಗುರುತಿಸಲಾಗಿದ್ದು, ಬುಧವಾರ ಉತ್ತರಾಖಂಡದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್ ಅಧಿಕಾರಿಗಳು ಈ ಹಿಂದೆ ಉತ್ತರಾಖಂಡದ ಪ್ರಮುಖ ಆರೋಪಿಗಳಾದ ಶ್ವೇತಾ ಸಿಂಗ್ ಮತ್ತು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬವರನ್ನು ಬಂಧಿಸಿದ್ದರು.
ಬುಲ್ಲಿ ಬಾಯಿ ಎಂಬ ಆ್ಯಪ್ ನಲ್ಲಿ ನೂರಾರು ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಹರಾಜಿಗಾಗಿ ಅಪ್ಲೋಡ್ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮುಂಬೈ ಪೊಲೀಸರು ಅಪರಿತರ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದರು.