ರಾಂಚಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಇಂದು (ಸೋಮವಾರ) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ₹20 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ಫೆಬ್ರವರಿ 2023 ರಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಎಂಬುವವರನ್ನು ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದರೆ ಎಂದು ಬಂಧಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆ ದಾಳಿ ಮಾಡಿದೆ. ಇನ್ನು ಇಡಿ ಅಂದಾಜಿಸಿರುವ ಪ್ರಕಾರ ಪತ್ತೆಯಾಗಿರುವ ಹಣ ಕಂತೆಯಲ್ಲಿ 25 ಕೋಟಿ ರೂ. ಗೂ ಅಧಿಕ ಮೊತ್ತಗಳು ಇರಬಹುದು ಎಂದು ಹೇಳಿದೆ.