ಪ್ರಧಾನಿ ನರೇಂದ್ರ ಮೋದಿ ಅಬುಧಾಬಿ ಪ್ರವಾಸದಲ್ಲಿದ್ದಾರೆ. ಮೋದಿ ಭಾಷಣಕ್ಕೂ ಮುನ್ನ ಬುರ್ಜ್ ಖಲೀಫಾ ತ್ರಿವರ್ಣಗಳಿಂದ ಕಂಗೊಳಿಸಿದೆ. ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಪ್ರಧಾನಿ ಮೋದಿಯವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.
ಇಂದು (ಫೆಬ್ರವರಿ 14) ಅಬುಧಾಬಿಯಲ್ಲಿ ನಿರ್ಮಿಸಲಾದ BAPS ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಬುರ್ಜ್ ಖಲೀಫಾ ಮೇಲ್ ಗೆಸ್ಟ್ ಆಫ್ ಆನರ್-ರಿಪಬ್ಲಿಕ್ ಆಫ್ ಇಂಡಿಯಾ ಎಂದು ಬರೆಯಲಾಗಿತ್ತು.