ಬಸ್​ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವು

Prasthutha|

- Advertisement -

ಹಾವೇರಿ: ಖಾಸಗಿ ಬಸ್​ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ಇಂದು(ಜೂ.29) ಮುಂಜಾನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ, ಬಸ್ ಡಿವೈಡರ್​ ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಬೆಳಗಾವಿ ಮೂಲದ ಬಸ್​ ಚಾಲಕ ಸದಾನಂದ(50), ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಮೀರಜ್​ ಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.