ಕಾರ್ಕಳ | ಬಸ್- ಕಾರು ಮಧ್ಯೆ ಅಪಘಾತ: ಒಂದೇ ಮನೆಯ ಮೂವರು ಮೃತ್ಯು

Prasthutha|

- Advertisement -

ಕಾರ್ಕಳ: ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಕಾರ್ಕಳದ ಬಜಗೋಳಿ ಸಮೀಪ ನಡೆದಿದೆ.

ಆಂಧ್ರ ಪ್ರದೇಶ ಮೂಲದ ಪತಿ-ಪತ್ನಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಶೃಂಗೇರಿಗೆ ಹೋಗುತ್ತಿದ್ದಾಗ ಈ ಅಪಘಾತ ನಡೆದಿದೆ.

Join Whatsapp