ಬೆಳ್ಳಂಬೆಳಗ್ಗೆ ಭೀಕರ ಅಪಘಾತ | ಐವರು ಸ್ಥಳದಲ್ಲೇ ಸಾವು; ಏಳು ಮಂದಿಗೆ ಗಾಯ

Prasthutha|

ಚಿತ್ರದುರ್ಗ : ಇಲ್ಲಿನ ಮೊಳಕಾಲ್ಮೂರು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾಗಿ, ಏಳು ಜನರು ಗಾಯಗೊಂಡಿದ್ದಾರೆ.

ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಗ್ರಾಮದ ಬಳಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

- Advertisement -

ಮೃತರನ್ನು ತಿಮ್ಮಣ್ಣ (40), ರತ್ನಮ್ಮ (38), ಮಹೇಶ್ (19), ದುರ್ಗಪ್ಪ (16) ಎಂದು ಗುರುತಿಸಲಾಗಿದೆ. ಮತ್ತೊಬ್ಬ 55 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಬಸ್ ಬೆಂಗಳೂರಿನಿಂದ ರಾಯಚೂರು ಜಿಲ್ಲೆಯ ಲಿಂಗಸಗೂರಿನತ್ತ ತೆರಳುತಿತ್ತು. ಕ್ರೂಸರ್ ಲಿಂಗಸಗೂರಿನಿಂದ ಬೆಂಗಳೂರಿನತ್ತ ಬರುತಿತ್ತು. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದರೆ. ಮೃತರು ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಹೊರಟಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -