ಕಲಬುರಗಿ: ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟದಲ್ಲಿ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಲಾಗಿದ್ದು, ಮಹಾರಾಷ್ಟ್ರಕ್ಕೆ ಅಂತಾರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಸೋಮವಾರ ಹೊರಟಿದ್ದ ಬಸ್ (ಕೆಎ-38 ಎಫ್-1201) ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಕಾರರು ತಡೆದು ನಿಲ್ಲಿಸಿದ್ದಾರೆ. ಬಳಿಕ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಬಸ್ ಪೂರ್ತಿ ಸುಟ್ಟು ಹೋಗಿದೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತಾರಾಜ್ಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬಸ್‌ನಲ್ಲಿದ್ದ 39 ಪ್ರಯಾಣಿಕರಿಗೆ ಸ್ಥಳೀಯ ಪೊಲೀಸರ ನೆರವಿನಿಂದ ಸುರಕ್ಷಿತವಾಗಿ ಪ್ರಯಾಣಿಸಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕಾರ್ಯಾಚರಣೆಯಲ್ಲಿರುವ ಬಸ್‌ಗಳನ್ನು ಹತ್ತಿರದ ಪೊಲೀಸ್ ಠಾಣೆ, ಬಸ್ ಡಿಪೊಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.