ಬಳ್ಳಾರಿ: ಮಕ್ಕಳು ಪ್ರಯಾಣಿಸುತ್ತಿದ್ದ ಶಾಲಾ ಬಸ್’ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಹೊತ್ತಿ ಉರಿದ ಘಟನೆ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆಯಲ್ಲಿ ನಡೆದಿದೆ.
ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿ 50 ಮಕ್ಕಳು ಪ್ರಯಾಣಿಸುತ್ತಿದ್ದರು ಈ ವೇಳೆ ಬಸ್ ಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿದೆ. ಸಿರುಗುಪ್ಪ ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದೆ.
ಬಸ್ ನ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಮಕ್ಕಳನ್ನು ಕೂಡಲೇ ಕೆಳಗಿಳಿಸಿ ದುರ್ಘಟನೆ ತಪ್ಪಿಸಿದ್ದಾರೆ.