ನಾಳೆ ಸಾರಿಗೆ ನೌಕರರಿಂದ ಮುಷ್ಕರ; ಮುಷ್ಕರ ತಡೆಯಲು ಸರಕಾರದ ಸಿದ್ಧತೆ?

Prasthutha|

ಸಾರಿಗೆ ನೌಕರರು ನಾಳೆ ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಕಡಿತ!

- Advertisement -

ಮುಷ್ಕರದಿಂದ ನಾಳೆ ಬಸ್ ಸಂಚಾರದಲ್ಲಿ ಅಸ್ಥವ್ಯಸ್ಥ ಸಾಧ್ಯತೆ

- Advertisement -

ಬೆಂಗಳೂರು : ನಾಳೆ ಸಾರಿಗೆ ನೌಕರರು ವಿವಿಧ ಬೇಡಿಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಸರಕಾರವು ಮುಷ್ಕರವನ್ನು ತಡೆಯಲು ಸಿದ್ಧತೆ ನಡೆಸುತ್ತಿದೆ ಎಂಬ ಆರೋಪಗಳು ಸಾರಿಗೆ ನೌಕರರಿಂದ ಕೇಳಿ ಬಂದಿವೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಕುರಿತಂತೆ ಸಿಎಂ ಯಡಿಯೂರಪ್ಪ, ಅಧಿಕಾರಿಗಳೊಂದಿಗೆ ಇಂದು ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿ ಚರ್ಚಿಸಿದ್ದಾರೆ.

ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಪ್ರತಿಕ್ರಿಯಿಸಿರುವ ಅವರು, ಇಂದು ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಾರಿಗೆ ನೌಕರರ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಸಾರಿಗೆ ನೌಕರರ ಶೇ.೮ರಷ್ಟು ವೇತನ ಏರಿಕೆಯ ಕುರಿತಂತೆ ಸಮ್ಮತಿ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸಲು ಸಾಧ್ಯವಿಲ್ಲ. ೬ನೇ ವೇತನ ಆಯೋಗದಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ನಾಳೆ ಮುಷ್ಕರ ನಡೆಯತ್ತಿರುವುದರಿಂದ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಲಿದೆ. ಹೀಗಾಗಿ ಖಾಸಗಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಅನುಮತಿ ನೀಡಲಾಗಿದೆ. ಮುಷ್ಕರದ ಸಂದರ್ಭದಲ್ಲಿ ಸಾರಿಗೆ ಬಸ್ ಗಳನ್ನು ಹಾನಿಗೊಳಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮುಷ್ಕರ ನಿರತರ ನೌಕರರು ಕೆಲಸಕ್ಕೆ ಹಾಜರಾಗದಿದ್ದರೇ ವೇತನ ಕಡಿತಗೊಳಿಸಲಾಗುವ ನಿಯಮ ಕೂಡ ಜಾರಿಗೊಳಿಸಲಾಗಿದೆ ಎಂದರು.

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಸೋಂಕಿನ ನಿಯಂತ್ರಣ ಕ್ರಮಗಳ ಪಾಲನೆ ಕಡ್ಡಾಯವಾಗಿದೆ. ಗುಂಪು ಗುಂಪುಗಾಗಿ ಸಭೆ ಸೇರುವುದು ನಿಷೇಧಿಸಲಾಗಿದೆ. ಒಂದು ವೇಳೆ ಕೊರೋನಾ ನಿಯಮ ಮೀರಿ ಗುಂಪು ಸೇರಿ ಪ್ರತಿಭಟನೆ ನಡೆಸಿದ್ರೆ.. ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಎಚ್ಚರಿಕೆ ನೀಡಿದರು



Join Whatsapp